ಬೆಂಗಳೂರು : ಕರ್ನಾಟಕ ಬಜೆಟ್ 2024ರ ಬಜೆಟ್ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ನೀಡಿದ್ದಾರೆ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಅಲ್ಲದೆ ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ತೋ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
ಕರಾವಳಿ ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಬಜೆಟ್‌ನಲ್ಲಿ ಸಿಎಂ ಘೋಷಣೆ
BUDGET BREAKING: ಕಲಬುರ್ಗಿಯಲ್ಲಿ ‘ವಚನ ಮಂಟಪ’ ಸ್ಥಾಪನೆ – ಸಿಎಂ ಸಿದ್ಧರಾಮಯ್ಯ ಘೋಷಣೆ