ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಸೋಮವಾರ ಬಿಡುಗಡೆ ಮಾಡಿದ್ದು ಶೇ.20.22ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 1,11,002 ವಿದ್ಯಾರ್ಥಿಗಳಲ್ಲಿ 22.446 ಮಂದಿ (ಶೇ.20.22) ತೇರ್ಗಡೆಯಾಗಿದ್ದಾರೆ. ಪಾಸಾಗಿದ್ದರೂ ಫಲಿತಾಂಶ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪರೀಕ್ಷೆ ಬರೆದಿದ್ದ 17,398 ವಿದ್ಯಾರ್ಥಿಗಳ ಪೈಕಿ 11,927 ವಿದ್ಯಾರ್ಥಿಗಳ ವಿವಿಧ ವಿಷಯಗಳ ಫಲಿತಾಂಶ ಹೆಚ್ಚಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಜುಲೈ 1 ರ ಇಂದು ಮಧ್ಯಾಹ್ನ 1 ಗಂಟೆ ನಂತರ ವೆಬ್ಸೈಟ್ https://karresults.nic.inನಲ್ಲಿ ಪಡೆದುಕೊಳ್ಳಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲಿಚ್ಚಿಸಿದ್ದ ವಿದ್ಯಾರ್ಥಿಗಳು ಜೂ.9 ರಿಂದ 20 ರವರೆಗೆ ರಾಜ್ಯಾದ್ಯಂತ 262 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆ-3ಕ್ಕೆ ಹಾಜರಾಗಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಈ ರೀತಿ ಚೆಕ್ ಮಾಡಿ
ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಹಾಜರಾಗಿದ್ದರೇ https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.