ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸುವ ಮೂಲಕ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಈ ಬಾರಿ ದಾಖಲೆಯ 91.6 ರಷ್ಟು ಫಲಿತಾಂಶ ಬಂದಿದೆ.
ದಾಖಲೆ ಪ್ರಮಾಣದ ಫಲಿತಾಂಶ
ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಫಲಿತಾಂಶ ದಾಖಲಾಗಿದ್ದು, ಒಟ್ಟಾರೆ ಶೇ. 90 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮಂಡಳಿಯ ಕಟ್ಟುನಿಟ್ಟಿನ ಕ್ರಮ ಹಾಗೂ ವಿದ್ಯಾರ್ಥಿಗಳ ಶ್ರಮದಿಂದಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
625ಕ್ಕೆ 625 ಅಂಕ ಪಡೆದ ಸಾಧಕರು
ಈ ಬಾರಿಯ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಒಟ್ಟು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಪೂರ್ಣ ಅಂಕ ಪಡೆದ ಸಾಧಕರ ವಿವರ ಹೀಗಿದೆ:
ರೂಪಾ ಚನ್ನಗೌಡ ಪಾಟೀಲ್ – ಬೆಳಗಾವಿ
ಜಾನವಿ – ಹಾಸನ
ಉತ್ಸವ್ ಪಾಟೀಲ್
ಬಾಲಕಿಯರ ಮೇಲುಗೈ: ಎಂದಿನಂತೆ ಈ ಬಾರಿಯೂ ಬಾಲಕಿಯರೇ ಪಾಸಾದವರ ಪ್ರಮಾಣದಲ್ಲಿ ಮುಂಚೂಣಿಯಲ್ಲಿದ್ದಾರೆ.
ಗ್ರಾಮೀಣ ಭಾಗದ ಸಾಧನೆ: ಫಲಿತಾಂಶದಲ್ಲಿ ಗ್ರಾಮೀಣ ಭಾಗದ ಶಾಲೆಗಳು ಉತ್ತಮ ಪ್ರದರ್ಶನ ನೀಡಿವೆ.
ವೆಬ್ಸೈಟ್ ಮಾಹಿತಿ: ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ.
ಫಲಿತಾಂಶ ನೋಡುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ವಿಧಾನಗಳ ಮೂಲಕ ಪಡೆಯಬಹುದು:
ವೆಬ್ಸೈಟ್: https://karresults.nic.in ಮೂಲಕ ಲಾಗಿನ್ ಆಗಿ ಫಲಿತಾಂಶ ನೋಡಬಹುದು.
ಮೊಬೈಲ್ ಆ್ಯಪ್: ‘KarnatakaOne’ ಆ್ಯಪ್ ಮೂಲಕವೂ ಮಾಹಿತಿ ಲಭ್ಯ.
SMS/WhatsApp: ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಮಂಡಳಿಯು ನೇರವಾಗಿ ಫಲಿತಾಂಶದ ಸಂದೇಶವನ್ನು ರವಾನಿಸಲಿದೆ.
ಡಿಜಿಲಾಕರ್ನಲ್ಲಿ ಅಂಕಪಟ್ಟಿ
ಇತಿಹಾಸದಲ್ಲೇ ಮೊದಲ ಬಾರಿಗೆ ಫಲಿತಾಂಶ ಪ್ರಕಟವಾದ ದಿನವೇ ಡಿಜಿಲಾಕರ್ನಲ್ಲಿ ಅಂಕಪಟ್ಟಿ ಲಭ್ಯವಿರಲಿದೆ.
ಇಂದು https://www.digilocker.gov.in ವೆಬ್ಸೈಟ್ನಿಂದ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್ಸೈಟ್ಗಳು:
ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ಪೋರ್ಟಲ್ಗಳ ಮೂಲಕ ಫಲಿತಾಂಶವನ್ನು ಪಡೆಯಬಹುದು:
karresults.nic.in
kseab.karnataka.gov.in
ರಿಸಲ್ಟ್ ಚೆಕ್ ಮಾಡುವುದು ಹೇಗೆ? (ಹಂತ-ಹಂತದ ಮಾಹಿತಿ):
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಸ್ಕೋರ್ಕಾರ್ಡ್ ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ:
ಮೊದಲು ಕರ್ನಾಟಕ ಫಲಿತಾಂಶದ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ ‘SSLC Examination-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈಗ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
‘Submit’ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು:
ಈ ವರ್ಷ ರಾಜ್ಯಾದ್ಯಂತ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ವಿಶೇಷ ಕ್ರಮಗಳನ್ನು ಕೈಗೊಂಡಿತ್ತು.








