ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, 625 ಕ್ಕೆ 625 ಅಂಕಗಳನ್ನು 22 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ. 66.14 ರಷ್ಟು ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್ ಇದ್ದು, ಕಲಬುರಗಿ ಲಾಸ್ಟ್ ಇದೆ. ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ.
ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ
ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ
ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ.
ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ.
‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ.
ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ
SMS ಮೂಲಕ ಫಲಿತಾಂಶ ಪಡೆಯಲು
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.