ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಫಲಿತಾಂಶವನ್ನು ಈಗಾಗಲೇ ಇಲಾಖಾ ವೆಬ್ ಸೈಟ್ https://sts.karnataka.gov.in/TET ರಲ್ಲಿ ಪ್ರಕಟಿಸಲಾಗಿದೆ.
ಅರ್ಹತಾ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಅರ್ಹತಾ ಪ್ರಮಾಣ ಪತ್ರಗಳನ್ನು ಒದಗಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ತಮ್ಮ ಅರ್ಹತಾ ಪ್ರಮಾಣಪತ್ರಗಳನ್ನು ಮುದ್ರಿಸಿಕೊಳ್ಳಬಹುದಾಗಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2014ರಿಂದ 2025ರ ತನಕ ನಡೆದ ಎಲ್ಲಾ ಟಿಇಟಿ ಪರೀಕ್ಷೆಗಳ ಅರ್ಹತಾ ಪ್ರಮಾಣಪತ್ರಗಳನ್ನು ಇದೇ ಲಿಂಕಿನಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಅರ್ಹತಾ ಪ್ರಮಾಣ ಪತ್ರವು ಅಭ್ಯರ್ಥಿಯ ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ ಎಂದು ತಿಳಿಯಪಡಿಸಿದೆ.









