ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಫಸ್ಟ್ ರ್ಯಾಂಕ್ ಪಡೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025 ರ ಫಲಿತಾಂಶಗಳನ್ನು ಇಂದು, ಅಂದರೆ ಮೇ 24, 2025, ಶನಿವಾರ ಅಧಿಕೃತವಾಗಿ ಪ್ರಕಟಿಸಿದೆ. KCET ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಮಧ್ಯಾಹ್ನ 2 ಗಂಟೆಗೆ cetonline.karnataka.gov.in/kea ಮತ್ತು karresults.nic.in ನಲ್ಲಿ ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪ್ರವೇಶಿಸಲು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಬೇಕಾಗುತ್ತದೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ.
ಸಿಇಟಿ ಪರೀಕ್ಷೆ ( CET Exam 2025) ಫಲಿತಾಂಶ ಈ ರೀತಿ ಚೆಕ್ ಮಾಡಿ
-ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
-ಕೆಸಿಇಟಿ ಫಲಿತಾಂಶ 2025 ಎಂಬಲ್ಲಿ ಕ್ಲಿಕ್ ಮಾಡಬೇಕು.
-ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ.
-ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.