ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ಚರ್ಚೆ ಮಧ್ಯ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ೧೭ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಮಧ್ಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ದೇವಸ್ಥಾನದ ಧರ್ಮಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರನ್ನು ನಾನು ವೈಯಕ್ತಿಕವಾಗಿ ಇಷ್ಟಪಡುತ್ತೇನೆ ಅವರು ಡಿಸಿಎಂ ಆಗಿದ್ದಾರೆ ಅಥವಾ ಮುಂದೆ ಸಿಎಂ ಆಗುತ್ತಾರೆ ಅಂತ ಅಲ್ಲ ಧರ್ಮದ ಗುರುಗಳನ್ನು ಕೊಂಡರೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಾರೆ ಆ ಕಾರಣಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಷ್ಟಪಡುತ್ತೇನೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶ್ರೀಗಳು ಹೇಳಿಕೆ ನೀಡಿದರು.








