ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿಇನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದಲಿ ಮಣ್ಣು, ಬಂಡೆಗಳು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ. ದುರಸ್ಥಿ ಕಾರ್ಯ ಶುರುವಾಗಿದ್ದು, ಬಳಿಕ ಕಾರವಾರ-ಬೆಂಘಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭವಾಗಲಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.