ಬೆಂಗಳೂರು : ಬೆಂಗಳೂರು : ‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದು, ಇದೀಗ ಸೀಟ್ ಬ್ಲಾಕಿಂಗ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 3 ಪ್ರತಿಷ್ಟಿತ ಕಾಲೇಜುಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು, ಆಕಾಶ್ ಇಂಜಿನಿಯರಿಂಗ್ ಕಾಲೇಜಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಸಮೇತ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್ ಹಾಗೂ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದರು.
ಬಂಧಿತ ಹರ್ಷ ಎನ್ನುವ ಆರೋಪಿ ಕೆಇಎ ಸೀಟ್ ಬ್ಲಾಕಿಂಗ್ ಹಗರಣದ ಕಿಂಗ್ ಪಿನ್ ಎಂದು ತಿಳಿದುಬಂದಿದೆ. ಕೌನ್ಸೆಲಿಂಗ್ ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್ ಗಳು, ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು ಹೋಗದ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಸೀಟ್ ಗಳನ್ನು ಬಂಧಿತ ಆರೋಪಿಗಳು ಬ್ಲಾಕ್ ಮಾಡುತ್ತಿದ್ದರು ಎನ್ನಲಾಗಿದೆ. ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ಮೆಂಟ್ ಕೋಟಾದ ಅಡಿ ಬೇರೆಯವರಿಗೆ ಡೀಲ್ ಮಾಡಿಕೊಳ್ಳುತ್ತಿದ್ದರು. ಮಧ್ಯವರ್ತಿಗಳ ಸಹಾಯದಿಂದ ಆರೋಪಿಗಳು ಡಿಲೀಟ್ ಮಾಡುತ್ತಿದ್ದರು ಎನ್ನಲಾಗಿದೆ.