ಉತ್ತರಕನ್ನಡ : ಒಂದೆಡೆ ಪಹಲ್ಗಾಮ್ ನಲ್ಲಿ ಉಗ್ರರ ನರಮೇಧಕ್ಕೆ ಇಡಿ ದೇಶಕ್ಕೆ ದೇಶವೇ ಕಿಡಿ ಕಾರುತ್ತಿದ್ದು, ಇತ್ತ 2020ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿ-ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದರು. ಇದೀಗ, ಪಕ್ರರಣದ ಮೋಸ್ಟ್ ವಾಂಟೆಡ್ ಆರೋಪಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಅನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಹೌದು 2020ರಲ್ಲಿ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಆರೋಪಿ 302 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಮೌಸೀನ್ ಸಿಂಧಗಿಯಲ್ಲಿರುವ ಮಾಹಿತಿ ತಿಳಿದ ಪೊಲೀಸರು, ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್ಐಎಯಿಂದ ಬಂಧಿತನಾಗಿದ್ದ ಸಾದಿಕ್, ಆರೋಪಿ ಮೌಸೀನ್ನನ್ನು ಟ್ರೇನ್ ಮಾಡಿದ್ದನು.ಈತನನ್ನು ಸೆರೆಹಿಡಿಯಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆಗೆ ಇಳಿದಿತ್ತು.
ಏನಿದು ಕೆಜಿ ಹಳ್ಳಿ, ಡಿಜೆ ಪ್ರಕರಣ?
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದನೆ ಮಾಡಲಾಗಿದೆ ಎಂದು ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಗಲಭೆ ಸಂದರ್ಭದಲ್ಲಿ ಅಂದಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಸಾರ್ವಜನಿಕರ ಮನೆಗೆ ಬೆಂಕಿ ಹಾಕಲಾಗಿತ್ತು. ಅಲ್ಲದೆ ಕಿಡಿಗೇಡಿಗಳು ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ಬೆಂಕಿ ಹಾಕಿದ್ದರು. ಈ ಸಂದರ್ಭದಲ್ಲಿ ಗಲಭೆ ನಿಯಂತ್ರಣ ಮಾಡಲು ಪೊಲೀಸರು ಗೋಲಿಬಾರ್ ಮಾಡಿದ್ದರು. ಮೂವರು ಮೃತಪಟ್ಟಿದ್ದರು.