ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ ದರ್ಶನ ಕೆ ವ್ಯವಸ್ಥೆ ಮಾಡಲಾಗಿದೆ. ಅದಾದ ನಂತರ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ.
ಅಲ್ಲಿನ ಸ್ಥಳೀಯ ಜನರಿಗೆ 12 ರಿಂದ 3 ಗಂಟೆಯವರೆಗೆ ಮಂಡ್ಯ ಮದ್ದೂರು ಸುತ್ತಮುತ್ತಲಿನ ಅವರ ಅಭಿಮಾನಿಗಳಿಗೆ, ಅಂತಿಮ ನಮನ ಸಲ್ಲಿಸೋಕೆ ಅವಕಾಶ ಇರುತ್ತದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.