ದಾವಣಗೆರೆ : ರಾಜ್ಯದಲ್ಲಿ ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಸದ್ದು ಮಾಡುತ್ತಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರೇ 5 ವರ್ಷ ಸಿಎಂ ಆಗಬೇಕಿತ್ತು. ಆದರೆ ಕೆಲ ಬೆಳವಣಿಗೆಯಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕುರ್ಚಿ ಖಾಲಿ ಆದ ತಕ್ಷಣ ಬೇಡಿಕೆ ಇಡುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ಒಳ್ಳೆ ಆಡಳಿತ ನೀಡುತ್ತಿದ್ದಾರೆ. ಸಿಎಂ ಕುರ್ಚಿ ಖಾಲಿ ಆದ ತಕ್ಷಣ ಕ್ಲೈಂ ಮಾಡುತ್ತೇವೆ ಎಂದು ಹೇಳಿದ್ದಾರೆ.