ಬೀದರ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅವರನ್ನು ಅಮಾನತು ಮಾಡಿದ ಬೆನ್ನಲ್ಲೇ ಇದೀಗ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಅಡುಗೆ ಸಹಾಯಕ ಪ್ರಮೋದ್ ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಇದೀಗ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಪ್ರಮೋದ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.