ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ಕಾನೂನು ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ಹಾಸ್ಟೆಲ್ ನಲ್ಲಿ KLE ಸಂಸ್ಥೆಯ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಾಂಕ್ ಬಟಕುರ್ಕಿ (19) ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೆ ಕಾರಣ ತಿಳಿದು ಬಂದಿಲ್ಲ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.