ಮಡಿಕೇರಿ : ದೇಶದ ವೀರ ಸೇನಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಅಪಮಾನ ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಡಿಸೆಂಬರ್ 12 ರ ನಾಳೆ ಕೊಡಗು ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ.
ಹೌದು, ಸೋಶಿಯಲ್ ಮೀಡಿಯಾದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ಕೇವಲ ಆರು ತಿಂಗಳ ಕಾಲ ಬಾರ್ ಕೌನ್ಸಿಲ್ ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಗುರುವಾರ ಸರ್ವಜನಾಂಗದ ಒಕ್ಕೂಟ ಜಿಲ್ಲಾ ಬಂದ್ ಗೆ ಕರೆ ನೀಡಿದೆ.
ಕೊಡಗು ಜಿಲ್ಲೆಯ ಅನುದಾನ ರಹಿತ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳು ಕೊಡಗು ಜಿಲ್ಲಾ ಬಂದ್ ಗೆ ಬೆಂಬಲ ನೀಡಿವೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧಾಹ್ನ 12 ಗಂಟೆಯವರೆಗೆ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.