ಕೊಡಗು : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಕೊಡಲಿಯಿಂದ ಭೀಕರವಾಗಿ ಕೊಂದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ಸ್ನೇಹಿತನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಲ್ಲೆಗೆ ಒಳಗಾಗಿದ್ದ ವಸಂತ (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೊಡಲಿದ್ದ ಹೊಡೆದು ನಿನ್ನೆ ಜೋಸೆಫ್ (45) ಮೇಲೆ ಕೊಲೆ ಆರೋಪಿ ಗಿರೀಶ್ ಭೀಕರವಾಗಿ ಕೊಲೆ ಮಾಡಿದ್ದಾನೆ.
ಜಗಳ ತಡೆಯಲು ಹೋಗಿದ್ದ ವಸಂತ ಮೇಲು ಗಿರೀಶ್ ಹಲ್ಲೆಗೈದಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ವಸಂತ್ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ. ಕೃತ್ಯದ ಬಳಿಕ ಪೊಲೀಸರಿಗೆ ಆ ಕೊಲೆ ಆರೋಪಿ ಗಿರೀಶ್ ಶರಣಾಗಿದ್ದಾನೆ.ಕುಶಲಾನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.