ಕೋಲಾರ : ಅತ್ತಿಗೆಯ ಮೇಲೆ ದೂರದ ಸಂಬಂಧಿ ಹಾಗೂ ಸ್ನೇಹಿತನಾಗಿದ್ದವನು ಕಣ್ಣು ಹಾಕಿದ್ದಾನೆ ಎಂದು ಯುವಕನೊಬ್ಬ ಸ್ನೇಹಿತನಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಇದರಿಂದ ಕೋಪಗೊಂಡ ಸ್ನೇಹಿತ ಯುವಕನ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ನಡೆದಿದೆ.
ಹೌದು ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್(26) ಎಂದು ತಿಳಿದುಬಂದಿದೆ. ಇನ್ನು ಕೊಲೆಗೈದ ಯುವಕನನ್ನು ಅಮ್ಜದ್ ಎಂದು ತಿಳಿದುಬಂದಿದೆ.ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ.
ರೋಹಿದ್ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ. ಈ ವಿಷಯ ಮನೆಯವರಿಗೆ ತಿಳಿದು ಅಮ್ಜಾದ್ ಮನೆ ಬಳಿ ಹೋಗಿ ರೋಹಿದ್ & ಸಂಬಂಧಿಕರು ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ಇದಾದ ಮೇಲೂ ಅಮ್ಜಾದ್ ರೋಹಿದ್ ಅತ್ತಿಗೆಗೆ ವಿಡಿಯೋ cl ಮಾಡಿ ಕಿರುಕುಳ ನೀಡಿದ್ದಾನೆ.ಇನ್ನು ನಿನ್ನೆ ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ನಿನ್ನ ಜೊತೆಗೆ ಮಾತನಾಡಬೇಕು ಬಾ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕುವಿನಿಂದ ಇರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.