ಬಾಗಲಕೋಟೆ : ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ಗೆ ಮೂವರು ಬಲಿಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಇದರ ಮಧ್ಯ ರಾಜ್ಯಕ್ಕೆ ಮತ್ತೊಂದು ವೈರಸ್ ಎಂಟ್ರಿ ಆಗಿದ್ದು, ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ.
ಹೌದು ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ.
ಇಳಕಲ್ ತಾಲೂಕಿನಲ್ಲಿ ಹಂದಿ ಸಾಗಾಣಿಕೆ ಮಾಡಿ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಗೆ ಈ ರೋಗ ಸೀಮಿತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ಜ್ವರ ಹರಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ಹೀಗಾಗಿ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮೂರು ರ್ಯಾಪಿಡ್ ಟೀಮ್ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ. 0-1 ಕಿ.ಮೀ ವರೆಗೆ ರೋಗ ಪೀಡಿತ ವಲಯ ಹಾಗೂ 1-10 ಕಿ.ಮೀ ವರೆಗೆ ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗ ಹರಡಿರುವ ಹಂದಿಗಳನ್ನು ಜೀವಂತ ಸಮಾಧಿ ಮಾಡಲಾಗುತ್ತಿದೆ.