ಮಂಗಳೂರು : ಇತ್ತೀಚಿಗೆ ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 4ನೇ JMFC ನ್ಯಾಯಾಲಯಕ್ಕೆ ಪೊಲೀಸರು ಬಂಧಿತ ಆರೋಪಿಗಳನ್ನು ಹಾಜರುಪಡಿಸಿದ್ದರು.ಇದೀಗ ವಿಚಾರಣೆಯ ಬಳಿಕ ನ್ಯಾಯಾಧೀಶರು ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಉಳ್ಳಾಲ ಪೊಲೀಸರಿಂದ ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಸಿಸಿಬಿ ಪೊಲೀಸರ ತಂಡದೊಂದಿಗೆ ಜಿಲ್ಲಾ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು 14 ದಿನ ಅಂದರೆ ಫೆಬ್ರವರಿ 3ನೇ ತಾರೀಖಿನವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಪ್ರಕರಣ ಹಿನ್ನೆಲೆ?
ಜ.17ರಂದು ಉಳ್ಳಾಲ ತಾ|ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದರು ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದೆ.