ಬೆಂಗಳೂರು : ಕೆಪಿಸಿಸಿ ಉಪಾಧ್ಯಕ್ಷ GN ನಂಜುಂಡಸ್ವಾಮಿ ಕಾರು ಅಪಘಾತವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕಾರು ಪಲ್ಟಿಯಾಗಿದ್ದರಿಂದ GN ನಂಜುಂಡಸ್ವಾಮಿ ತಲೆಗೆ ಪೆಟ್ಟಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿರುವ ಜಿಎನ್ ನಂಜುಂಡಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲೀಸಲಾಗಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.