ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರೆಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿಗೆ ಸೂಚಿಸಿದ್ದೇನೆ. ನಾವು ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 60 ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ.
ಅಲ್ಲದೆ ಯಾವುದೇ ಅಗತ್ಯಕ್ಕಾಗಿ ಸ್ಟ್ಯಾಂಡ್‌ನಲ್ಲಿರಲು ಇನ್ನೂ 40 ಜನರನ್ನು ಮರು ನಿಯೋಜಿಸಿದ್ದೇವೆ.ತಕ್ಷಣದ ಪ್ರತಿಕ್ರಿಯೆಗಾಗಿ ನಾವು ಅಗ್ನಿಶಾಮಕ ಮತ್ತು ತುರ್ತು ಸೇವೆಗಳನ್ನು ನಿಲ್ಲಿಸಿದ್ದೇವೆ. ಅಲ್ಲದೆ ಜಿಲ್ಲಾಡಳಿತ ಕೂಡ ಎಲ್ಲ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ ಎಂದು ತಿಳಿಸಿದ್ದಾರೆ.
Rain is forecast to continue.
I have advised BBMP to be on high alert. We have already deployed about 60 NDRF/SDRF personnel in Bengaluru and redeploying another 40 to be on stand by for any necessity. We have put Fire and Emergency Services on stand by for immediate response.…— Krishna Byre Gowda (@krishnabgowda) October 15, 2024