ಬೆಂಗಳೂರು : ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಪರಿಹಾರ ನಿಗದಿಪಡಿಸಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ವಿಶೇಷ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂ ಸ್ವಾಧೀನ ಪರಿಹಾರ ನಿಗದಿಪಡಿಸಲಾಗಿದೆ. ಕೃಷಿ ಭೂಮಿಗೆ ಎಕರೆಗೆ 40 ಲಕ್ಷ ರೂಪಾಯಿ ಪರಿಹಾರ ನಿಗದಿಪಡಿಸಲಾಗಿದೆ. ಇನ್ನು ಒಣ ಭೂಮಿಗೆ ಎಕರೆಗೆ 30 ಲಕ್ಷ ಪರಿಹಾರ ನಿಗದಿಪಡಿಸಲಾಗಿದೆ. ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳದಿಂದ ಜಮೀನು ಮುಳುಗಡೆ ಆಗುತ್ತವೆ,
ಸುಮಾರು 75,000ಕ್ಕೂ ಹೆಚ್ಚು ಎಕರೆ ಭೂಮಿ ಮುಳುಗಡೆ ಆಗುತ್ತವೆ. ಈ ಭೂಮಿಗೆ ಪರಿಹಾರ ನೀಡಬೇಕಾಗುತ್ತದೆ. 5 ಲಕ್ಷ ಹೆಕ್ಟರ್ ಗಿಂತ ಹೆಚ್ಚು ನೀರಾವರಿ ಸೌಲಭ್ಯ ಸಿಗಲಿದೆ. ಆ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಮುಳುಗಡೆಯಾಗುವ ಭೂಮಿಗೆ ಪರಿಹಾರ ನಿಗದಿಗೆ ವಿಶೇಷ ಸಂಪುಟ ಸಭೆ ನಡೆಸಲಾಗಿತ್ತು. ರೈತರು ಆ ಭಾಗದ ಶಾಸಕರು ಹಾಗೂ ಹೋರಾಟಗಾರರ ಜೊತೆಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.