ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪಿ.ಎಂ,ನರೇಂದ್ರ ಸ್ವಾಮಿ ಅವರನ್ನು ನೇಮಕ ಮಾಡಿ ಇತ್ತೀಚಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಒಂದು ನೇಮಕ ವಿಚಾರವಾಗಿ, ಹೈ ಕೋರ್ಟ್ ಪಿಎಂ ನರೇಂದ್ರಸ್ವಾಮಿ ರಾಜ ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ನೀಡಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಪಿಎಂ ನರೇಂದ್ರಸ್ವಾಮಿ ನೇಮಕವನ್ನು ಪ್ರಶ್ನಿಸಿ ಇಂದು ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ ನಡೆಯಿತು. ಶಾಸಕರಾಗಿ ಲಾಭದಾಯಕ ಹುದ್ದೆ ಹೊಂದಿರುವುದಾಗಿ ಆರೋಪ ಮಾಡಿದ್ದು ಎಂ ಶ್ರೇಯಸ್ ಎಂಬುವವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಯಿತು. ಸರ್ಕಾರ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಿಎಂ ನರೇಂದ್ರಸ್ವಾಮಿಗೆ ನೋಟಿಸ್ ನೀಡಲಾಗಿದೆ. ಸಿಜೆ ವಿಭು ಬಕ್ರೂ, ನ್ಯಾ. ಸಿಎಂ ಜೋಶಿ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೊಳಿಸಲಾಗಿದೆ.