ಮೈಸೂರು : ಮೈಸೂರಿನಲ್ಲಿ ಏಕಾಏಕಿ ಕೆಎಸ್ ಆರ್ ಟಿಸಿ ಬಸ್ ವೊಂದು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ಘಟಕಕ್ಕೆ ಸೇರಿದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ಬಸ್ ನಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಡಾಡಿಯಿಂದ ಹೆಚ್.ಡಿ.ಕೋಟೆಗೆ ಹೋಗುತ್ತಿದ್ದ ಸಾರಿಗೆ ಬಸ್ ದೇವಲಾಪುರ-ಜಕ್ಕಹಳ್ಳಿ ಗ್ರಾಮದ ಮಾರ್ಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.