ಮಂಡ್ಯ : ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮಧ್ಯ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರಿನ ಚಾಲಕ ಸ್ಥಳದಲ್ಲಿ ಸಾವನಪ್ಪಿದ್ದು ಇನ್ನೂ ಕಾರಿನಲ್ಲಿದ್ದ ಉಳಿದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಮನು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.