ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಒಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಮತ್ತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಇನ್ನೂ ಗಾಯಗೊಂಡ ಮತ್ತಿಬ್ಬರನ್ನು ಹೊಸಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯಿಂದ ಕೆಎಸ್ಆರ್ಟಿಸಿ ಬಸ್ ಬಂದು ಚಿಂತಾಮಣಿಗೆ ತೆರಳುತ್ತಿತ್ತು. ಈ ವೇಳೆ ಈ ಒಂದು ಅಪಘಾತ ಸಂಭವಿಸಿದ್ದು ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.