ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, KSRTC ಬಸ್ ಡಿಕ್ಕಿಯಾಗಿ ಓರ್ವ ಬಾಲಕಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಲ್ಲರ ಬಾಣವಾಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು ನಿಂದ ಕೆಎಸ್ಆರ್ಟಿಸಿ ಬಸ್ ಹೊರನಾಡಿಗೆ ತೆರಳುತ್ತಿತ್ತು. ಈ ವೇಳೆ ಆಟೋಗೆ ಬಸ್ ಡಿಕ್ಕಿಯಾಗಿದೆ. ಚಾಲಕ ಯೂಟರ್ನ್ ತೆಗೆದುಕೊಳ್ಳುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಆಟೋಗೆ ಡಿಕ್ಕಿಯಾಗಿದೆ. ಈ ವೇಳೆ ಸಂಬಂಧಿಕರ ಮನೆಗೆ ಆಟೋದಲ್ಲಿ ಒಂದೇ ಕುಟುಂಬದ ಆರು ಜನರು ತೆರಳುತ್ತಿದ್ದರು.
ಘಟನೆಯಲ್ಲಿ ಆಟೋ ಚಾಲಕ ಶ್ರೀನಿವಾಸ (40) ಮತ್ತು ಪುಟ್ಟಮ್ಮ (55) ಹಾಗು ಬಾಲಕಿ ವರ್ಷಿಣಿ (13) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಟೋದಲ್ಲಿ ತೆರಳುತ್ತಿದ್ದ ಲೇಖನ (11) ಸ್ಥಿತಿ ಗಂಭೀರವಾಗಿದೆ. ತಕ್ಷಣ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.