ಕರ್ನೂಲ್ : ಎರಡು ಬೈಕ್ ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆಆಂಧ್ರಪ್ರದೇಶದ ಪಾಂಡವಗಲ್ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ಪಾಂಡವಾಗಲ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
ಸಾರಿಗೆ ಬಸ್ ಡಿಕ್ಕಿಯಾಗಿ ಎರಡು ಬೈಕ್ಗಳಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಈ ಒಂದು ಸಾರಿಗೆ ಬಸ್ ಹೊರಟಿತ್ತು.
ಅಪಘಾತದಲ್ಲಿ ರಾಯಚೂರು ಮೂಲದ ಇಬ್ಬರು ಹಾಗು ಕರ್ನುಲ್ ಜಿಲ್ಲೆಯ ಆದೋನಿ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಆಂಧ್ರಪ್ರದೇಶದ ಆದೋನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.