ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಇದೀಗ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹೌದು, ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಮೂಲದ ಪ್ರದೀಪ್ (40) ಯುವತಿಗೆ ಲೈಂಗಿಕ ಕಿಕುಕುಳ ನೀಡಿದ್ದಾನೆ.
ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಕ್ಷಣವೇ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.