ತುಮಕೂರು : KSRTC ಬಸ್ ಚಾಲಕ, ಕಂಡಕ್ಟರ್ ಹಾಗು ಪ್ರಯಾಣಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ KSRTC ಬಸ್ ಚಾಲಕ ಹಾಗು ಕಂಡಕ್ಟರ್ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಪಾವಗಡದಿಂದ ತುಮಕೂರಿಗೆ ಬಸ್ ತೆರಳುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರು- ನಿರ್ವಾಹಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ನಿರ್ವಾಹನಕ ಮೇಲೆ ಪ್ರಯಾಣಿಕರು ಹಲ್ಲೆ ನಡೆಸುತ್ತಿದ್ದಾಗ, ಗಲಾಟೆ ಬಿಡಿಸಿಲು ಬಂದ ಚಾಲಕನ ಮೇಲೂ ಕಿಡಿಗೇಡಿಗಳು ಥಳಿಸಿದ್ದಾರೆ.
ಹಲ್ಲೆಗೆ ಸದ್ಯ ನಿಖರ ಕಾರಣ ಏನು ಎಂಬುವುದು ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾಲಕ ಹಾಗು ಕಂಡಕ್ಟರ್ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.