ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಹೊರವಲಯದ ನೇಕಾರ ನಗರದ ಬಳಿ ಈ ಒಂದು ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಸವಣೂರಿನಿಂದ ಬಸ್ ವಾಸ್ಕೋಕೆ ತೆರಳುತ್ತಿತ್ತು.ಘಟನೆ ಕುರಿತು ಹುಬ್ಬಳ್ಳಿಯ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.