ಯಾದಗಿರಿ : ಬಾಕಿ ಬಿಲ್ ಬಿಡುಗಡೆಗಾಗಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.
ಹೌದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಯಾದಗಿರಿ ಜಿಲ್ಲೆಯ ಪಿಡಬ್ಲ್ಯೂಡಿ ಅಧಿಕಾರಿಗಳ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಲಂಚ ಪಡೆದಿರುವ ಬಗ್ಗೆ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪಿಡಬ್ಲ್ಯೂಡಿ ಅಧಿಕಾರಿಗಳ ವಸೂಲಿ ದಂಧೆಯ ಕರಾಳ ಮುಖ ಇದೀಗ ಬಯಲಾಗಿದೆ. ಬಾಕಿ ಹೆಣ ಬಿಡುಗಡೆಗಾಗಿ ಫೈಲ್ ಗೆ ಸಹಿ ಮಾಡಲು ಹಂಚಿಕೆ ಬೇಡಿಕೆ ಇಟ್ಟಿದ್ದಾರೆ ಐದಾರು ಅಧಿಕಾರಿಗಳು ಹಣ ವಸೂಲಿಗೆ ಎಳೆದಿದ್ದಾರೆ ಲಂಚ ಕೊಟ್ಟರೆ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.