ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಿದೆ.
ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯದಿಂದ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ 28 ಕ್ಕೆ ಮುಂದೂಡಿದೆ.