ಸಿಕ್ಕಿಂ : ಸಿಕ್ಕಿಂನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸೇನಾ ಶಿಬಿರದಲ್ಲಿ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, 6 ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಸಿಕ್ಕಿಂನ ಛಾಟೆನ್ನಲ್ಲಿರುವ ಸೇನಾ ಶಿಬಿರದ ಮೇಲೆ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಪ್ರತಿಕೂಲ ಹವಾಮಾನ ಮತ್ತು ಭೂಪ್ರದೇಶದ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದುವರೆಗೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾಲ್ವರು ವ್ಯಕ್ತಿಗಳನ್ನು ಸಣ್ಣಪುಟ್ಟ ಗಾಯಗಳೊಂದಿಗೆ ರಕ್ಷಿಸಲಾಗಿದೆ” ಎಂದು ಅಧಿಕಾರಿ ದೃಢಪಡಿಸಿದರು. “ಕಾಣೆಯಾದ ಆರು ಸಿಬ್ಬಂದಿಯನ್ನು ಪತ್ತೆಹಚ್ಚಲು ರಕ್ಷಣಾ ತಂಡಗಳು ಸವಾಲಿನ ಪರಿಸ್ಥಿತಿಗಳಲ್ಲಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿವೆ.