ಹಾಸನ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದಿಂದ ಹಲವರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಗುಡ್ಡ ಕುಸಿತ ಉಂಟಾಗಿದ್ದು, ಅದೃಷ್ಟಶಾತ್ ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೌದು ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಗುಡ್ಡ ಕುಸಿತ ಉಂಟಾಗಿ ಓಮ್ನಿ ಕಾರೊಂದು ಮಣ್ಣಿನ ರಾಶಿಯ ಅಡಿ ಸಿಲಿಕಿದ ಘಟನೆ ಸಕಲೇಶಪುರ ತಾಲೂಕಿನ ದೊಡ್ಡ ತಪ್ಪಲು ಬಳಿ ಈ ಒಂದು ಘಟನೆ ನಡೆದಿದೆ.
ಅದರೆ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಸುಮಾರು ನಾಲ್ಕೈದು ಜನ ಪ್ರಯಾಣಿಸುತ್ತಿದ್ದು ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಭೂಕುಸಿತದಿಂದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿತದಿಂದಾಗಿ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಉಂಟಾಗಿದ್ದು, ಸುಮಾರು 5 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಆಗಿದೆ.