ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಾನೂನು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿಠಲ ರಾಠೋಡ್ (60) ಎನ್ನುವವರನ್ನು ಕೊಲೆ ಮಾಡಲಾಗಿದ್ದು ಹುಬ್ಬಳ್ಳಿಯ ನವನಗರ್ ಠಾಣೆ ಪೋಲಿಸರಿಂದ ಮೂವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮೇಘವ್ ಆತನ ಪತ್ನಿ ವಿಮಲ ಹಾಗೂ ಭಗವಾನ್ ಎಂದು ತಿಳಿದುಬಂದಿದೆ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ತಳ್ಳಿ ವಿಠಲ ರಾಠೋಡ್ನನ್ನು ಮೂವರು ಕೊಲೆ ಮಾಡಿದ್ದಾರೆ. ಕಟ್ಟಡದ ಮೇಲಿನಿಂದ ಬಿದ್ದು ಸಾವನಪ್ಪಿದ್ದಾರೆ ಎಂದು ಆರೋಪಿಗಳು ಬಿಂಬಿಸಿದ್ದರು. ವಿಚಾರಣೆ ಮಾಡಿದಾಗ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








