ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದೀಗ ಬಂಧಿತ ಎಲ್ಲ ನಾಲ್ಕು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೌದು ಬಿಗ್‌ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದು, ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣ ಹಿನ್ನೆಲೆ?
ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್ ಕಾರಿನ ಮೇಲೆ ದೊಣ್ಣೆಯಿಂದ ಹೊಡೆದು ಕಾರಿಗೆ ಕಾರಿಗೆ ಹಾನಿ ಮಾಡಲಾಗಿತ್ತಲ್ಲದೇ ಜಗದೀಶ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದ್ದರು ಎನ್ನಲಾಗಿದೆ.
ಗಾಳಿಯಲ್ಲಿ ಗುಂಡು ಹಾರಿಸಿದ ಸಂಬಂಧ ತೇಜಸ್ ಎಂಬವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದೀಗ ಲಾಯರ್ ಜಗದೀಶ್ ಹಾಗೂ ಅವರ ಪುತ್ರ, ಗನ್ ಮ್ಯಾನ್, ಕಾರು ಚಾಲಕನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.