ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಾಕಿ ಇರುವ 2 ತಿಂಗಳ ಹಣ ಹಾಕುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಹಣ ಹಾಕೋದು ಸ್ವಲ್ಪ ವಿಳಂಬವಾಗಿದೆ. ಈಗ ಎಲ್ಲಾ ಸರಿಯಾಗಿದೆ. ಬಾಕಿ ಇರುವ 2 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಫಿಲ್ಟರ್ ಮಾಡಿಲ್ಲ. ಎಲ್ಲರಿಗೂ ಹಣ ಸಿಗುತ್ತೆ. ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶೀಘ್ರವೇ 2 ತಿಂಗಳ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.