ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿಯ ಮೇಲೆ ಚಿರತೆ ದಾಳಿ ಮಾಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದೆ.
ಇಂದು ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಶಾಂತಪ್ಪ ಕೆಲಸಕ್ಕೆ ಬಂದಿದ್ದ ಚಿರತೆಯ ಕೇಜುಗಳನ್ನು ಸ್ವಚ್ಛ ಮಾಡುತ್ತಿದ್ದಾಗ ಏಕಏಕಿ ಚಿರತೆ ದಾಳಿ ಮಾಡಿದೆ. ಪ್ರಾಣಿ ಪಾಲಕ ಶಾಂತಪ್ಪ ಮುಖ ಮತ್ತು ಕತ್ತಿನ ಭಾಗಕ್ಕೆ ಗಂಭೀರವಾದಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಶಾಂತಪ್ಪ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








