ಉತ್ತರ ಕನ್ನಡ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ತಡರಾತ್ರಿ ಚಿರತೆ ನುಗ್ಗಿದ್ದು, ಸಾಕು ನಾಯಿ ಮೇಲೆ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾಗೇರಿಯಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೋಟದ ಮನೆಗೆ ತಡರಾತ್ರಿ 11 ಗಂಟೆ ಸುಮಾರಿಗೆ ಚಿರತೆ ನುಗ್ಗಿದೆ. ತೋಟದ ಮನೆಯಲ್ಲಿ ಸಾಕು ನಾಯಿಯನ್ನು ಅಟ್ಟಾಡಿಸಿಕೊಂಡು ಚಿರತೆ ಬಂದಿದೆ. ಸಾಕು ಚಿರತೆ ದಾಳಿಯಿಂದ ತಪ್ಪಿಸಿಕೊಂಡಿದೆ.
ಚಿರತೆ ದಾಳಿಯ ದೃಶ್ಯಗಳು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೋಟದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.