ಉತ್ತರಕನ್ನಡ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೂ ಚಿರತೆ ನುಗ್ಗಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾಗೇರಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸದಲ್ಲಿ ಈ ಒಂದು ಘಟನೆ ನಡೆದಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಇರುವಾಗಲೇ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿರತೆ ವಿಶ್ವೇಶ್ವರ ಹೆಗಡೆ ಮನೆಗೆ ನುಗ್ಗಿದೆ. ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿದ್ದ ಸಾಕು ನಾಯಿಗಳನ್ನು ಚಿರತೆ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ನಾಯಿಗಳು ಚಿರತೆಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.