ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದರು ಇದೀಗ ಹಾವೇರಿಯಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ ರೈತ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.ಶಂಕರಗೌಡರ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಕಳೆದ ವರ್ಷ ಸಹ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಈ ವರ್ಷ ಎರಡನೇ ಬಾರಿಗೆ ರೈತ ಶಂಕರಗೌಡರ ತೋಟದ ಮನೆ ಮುಂದೆ ಕಾಣಿಸಿಕೊಂಡು ಆಂತಕ ಸೃಷ್ಟಿಯಾಗಿದೆ.ಒಂದೇ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿರುವುದಕ್ಕೆ ರೈತ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.








