ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಓಡಾಟ ಕಂಡು ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ರಸ್ತೆಯಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು ಬೆಂಗಳೂರಿನಲ್ಲಿ ಮನೆಯ ಮುಂದೆ ಚಿರತೆ ಬಿಂದಾಸ್ ಆಗಿ ಓಡಾಡಿರುವ ದೃಶ್ಯ ಸೆರೆಯಾಗಿದೆ. ಚಿರತೆ ಹೆಜ್ಜೆ ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆ ಬಂದಿರುವಂತಹ ಶಂಕೆ ವ್ಯಕ್ತವಾಗಿದ್ದು ಜನರು ಹೊರಗಡೆ ಬರಲು ಭಯ ಭೀತರಾಗಿದ್ದಾರೆ.








