ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸಮೀಪ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಟೋಲ್ ಪ್ಲಾಜಾ ಬಳಿ ರಸ್ತೆ ದಾಟುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ನಸುಕಿನ ಜಾವ 3 ಗಂಟೆಗೆ ಹೆದ್ದಾರಿಯಲ್ಲಿ ಚಿರತೆ ನಡೆದುಕೊಂಡು ಹೋಗಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿರತೆ ಪನಕ್ ಕಂಪನಿ ಬಳಿಯಿಂದ ಎನ್ ಟಿಟಿಎಫ್ ಗ್ರೌಂಡ್ ಕಡೆಗೆ ಪರಾರಿಯಾಗಿದೆ. ಕಳೆದ ವಾರ ಜಿಗಣಿ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಎಲೆಕ್ಟ್ರಾನಿಕ್ ಸಿಟಿ ಬಳಿ ಚಿರತೆ ಕಾಣಿಸಿಕೊಂಡಿರುವುದು ಐಟಿಬಿಟಿ ಕಂಪನಿಗಳ ಸಿಬ್ಬಂದಿ ಹಾಗೂ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.