ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿಷೇಧದ ಕುರಿತು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪ್ರಿಯಾಂಕ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗನಿಸುವುದು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಪ್ರಶ್ನಿಸಲು ಧೈರ್ಯ ಮಾಡಿದರಿಂದ ಬೆದರಿಕೆ ಕರೆಗಳು ಬರುತ್ತಿವೆ.ನನ್ನ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆಗಳು ಹಾಗೂ ನಿಂದನೆ ಕರೆಗಳು ಬರುತ್ತಿದ್ದು, ಆದರೆ ನಾನು ಇದು ಯಾವುದಕ್ಕೂ ವಿಚಲಿತನಾಗುವುದಿಲ್ಲ.
ಅಥವಾ ಆಶ್ಚರ್ಯ ಪಡುವುದಿಲ್ಲ ಆರ್ ಎಸ್ ಎಸ್ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ಇನ್ನು ಅವರು ನನ್ನನ್ನು ಏಕೆ ಬಿಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಮಾನತೆ ವಿವೇಚನೆ ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್ ಗಳಿಂದ ಶುದ್ಧೀಕರಿಸಬೇಕಿದೆ ಎಂದು ಎಕ್ಸ್ಕತೆಯಲ್ಲಿ ಸಚಿವ ಪ್ರಿಯಾಂಕರಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
For the past two days, my phone hasn’t stopped ringing. Calls filled with threats, intimidation and the filthiest abuse directed at me and my family, simply because I dared to question and restrain RSS activities in government schools, colleges and public institutions.
But I’m…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 14, 2025