ಬೆಂಗಳೂರು : ಡಾಗ್ ಸತೀಶ್ ಗೆ ಬೆದರಿಕೆ ಹಾಕಿ ಅಶ್ಲೀಲವಾಗಿ ನಿಂದಿಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ರಜತ್ ವಿರುದ್ಧ ಮತ್ತೊಂದು fir ದಾಖಲಾಗಿದೆ.
ಡಾಗ್ ಸತೀಶ್ ದೂರನ್ನು ಆದರಿಸಿ ಪೊಲೀಸರು ಇದೀಗ ರಜೆತ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ರಜತ್ ಹಾಗೂ ಧನರಾಜ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ್ದಕ್ಕೆ ಬೆದರಿಕೆ ಹಾಕಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಆಗಿದೆ.








