ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಮುಂದೆ ಸಚಿವ ಮಲ್ಲಿಕಾರ್ಜುನ್ ರಾಜಿನಾಮೆ ಪ್ರಸ್ತಾಪ ಇಟ್ಟಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದಾರೆ.
ಹೌದು ವ್ಯವಹಾರಿಕವಾದ ಮತ್ತು ಕ್ಷೇತ್ರದ ಕೆಲಸ ಹಿನ್ನೆಲೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ ಮಾಡಿದ್ದಾರೆ. ಕಳೆದ ವಾರ ಸಿಎಂ ಸಿದ್ದರಾಮಯ್ಯ ಎದುರು ಸಚಿವ ಮಲ್ಲಿಕಾರ್ಜುನ ಕುರಿತು ಪ್ರಸ್ತಾಪ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಎಸ್ ಎಸ್ ಮಲ್ಲಿಕಾರ್ಜುನ್ ಈ ನಡೆ ಬಹಳ ಮಹತ್ವ ಪಡೆದಿದೆ.
ಅಲ್ಲದೇ ತಮ್ಮ ಪುತ್ರನಿಗೆ ಮಲ್ಲಿಕಾರ್ಜುನ್ ಟಿಕೆಟ್ ಕೇಳುತ್ತಿದ್ದಾರೆ. ರಾಜಕೀಯ ಭಾಗವಾಗಿ ಎಸ್. ಎಸ್ ಮಲ್ಲಿಕಾರ್ಜುನ್ ಈ ಒಂದು ದಾಳ ಉರುಳಿಸಿದರಾ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಇತ್ತೀಚಿಗೆ ಕಾಂಗ್ರೆಸ್ಸಿನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಹೊಂದಿದ ನಂತರ ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣೆಗೆ ತಮ್ಮ ಪುತ್ರನಿಗೆ ಎಸ್ಸೆಸ್ ಮಲ್ಲಿಕಾರ್ಜುನ್ ಟಿಕೆಟ್ ನೀಡುವಂತೆ ಲಾಬಿ ಮಾಡುತ್ತಿದ್ದಾರೆ ಎಂದು ಕೇಳಿಬರುತ್ತದೆ.








