ತೆಲಂಗಾಣ: ಮುಂಬರುವ ಲೋಕಸಭೆ ಚುನಾವಣೆಗೆ ತೆಲಂಗಾಣದಲ್ಲಿ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ಬಿಆರ್‌ಎಸ್‌ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಅಧಿಕೃತವಾಗಿ ತಿಳಿಸಿದ್ದಾರೆ.

BREAKING : ‘ಚುನಾವಣಾ ಆಯುಕ್ತರ’ ನೇಮಕಕ್ಕೆ ತಡೆ ನೀಡಲು ‘ಸುಪ್ರೀಂ ಕೋರ್ಟ್’ ನಕಾರ

ಈ ಕುರಿತಂತೆ ಸುದ್ದಿಸಂಸ್ಥೆಯೊಂದು ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹೈದರಾಬಾದ್‌ನಲ್ಲಿರುವ ಕೆಸಿಆರ್ ಅವರ ನಂದಿನಗರದ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಮತ್ತು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್‌ಎಸ್ ಪ್ರವೀಣ್ ಕುಮಾರ್ ನಡುವೆ ನಡೆದ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಅಂತಿಮವಾಗಿ ಮೈತ್ರಿಯಾಗುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.

UPDATE : ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅಮಿತಾಭ್ ಬಚ್ಚನ್ ಗೆ ಆಂಜಿಯೋಪ್ಲಾಸ್ಟಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌ ಟಿಕೆಟ್‌ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ.ಮೂಲಗಳ ಪ್ರಕಾರ, ನಾಗರ್‌ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್‌ಪಿಗೆ ನೀಡುವುದಾಗಿ ಬಿಆರ್‌ಎಸ್‌ ಮುಖ್ಯಸ್ಥ ಕೆಸಿಆರ್ ಘೋಷಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 17 ಲೋಕಸಭಾ ಕ್ಷೇತ್ರಗಳಿವೆ. ಬಿಆರ್ ಎಸ್ ಈಗಾಗಲೇ 11 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌: ಎಣ್ಣೆಯಿಂದ ಮೆದುಳಿನ ಮೇಲಾಗುತ್ತೆ ಇಷ್ಟೆಲ್ಲಾ ದುಷ್ಪರಿಣಾಮ….!

Share.
Exit mobile version