ಕಲಬುರಗಿ : ಕಲಬುರ್ಗಿಯಲ್ಲಿ ಬೆಳ್ಳಂ ಬೆಳ್ಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಲಂಚ ಸ್ವೀಕರಿಸುತ್ತಿದ್ದಾಗಲೇ ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕ ಪ್ರವೀಣ್ ಜಾಧವ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೌದು ಇಂದು ಬೆಳಿಗ್ಗೆ ಕಲಬುರ್ಗಿ ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಭೂ ದಾಖಲೆಗಳ ಉಪನಿರ್ದೇಶಕ.ಪ್ರವೀಣ್ ಜಾಧವ್ ಹಾಗೂ ಸರ್ವೇಯರ್ ಶರಣಾಗೌಡ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗಿ ಬಿದ್ದಿದ್ದಾರೆ.
ರೇವಣಸಿದ್ಧಪ್ಪ ಎನ್ನುವವರ ಹತ್ತಿರ 25 ಗುಂಟೆ ಜಮೀನು ಪೋಡಿ ಸರ್ವೇಗಾಗಿ ಪ್ರವೀಣ್ ಜಾದವ್ ಸುಮಾರು 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ರೇವಣಸಿದ್ಧಪ್ಪ ದೂರಿನ ಮೇರೆಗೆ ಇದೀಗ ಲೋಕಾಯುಕ್ತ ಅಧಿಕಾರಿಗಳು 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಪ್ರವೀಣ್ ಜಾದವ್ ಹಾಗೂ ಸರ್ವೇಯರ್ ಶರಣಾಗೌಡ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇನ್ನೂ ಭ್ರಷ್ಟ ಅಧಿಕಾರಿ ಪ್ರವೀಣ್ ಜಾಧವ್ ಕಚೇರಿಯ ಸಿಬ್ಬಂದಿಗಳಿಗೆ ಪ್ರತಿ ಕಡತಕ್ಕೆ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಒಂದು ವೇಳೆ ಹಣ ನೀಡದಿದ್ದರೆ ಅಮಾನತು ಮಾಡುತ್ತೇನೆ ಎಂದು ಸಿಬ್ಬಂದಿಗಳಿಗೆ ಬೆದರಿಕೆ ಹಾಕುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ