ಬೆಂಗಳೂರು : ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು, ರಾಜ್ಯದ 25 ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಭ್ರಷ್ಟಾಚಾರ, ಆಕ್ರಮ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವಡೆ ದಾಳಿ ನಡೆಸಿದ್ದಾರೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು ಚಳಿ ಬಿಡಿಸಲು ಮುಂದಾಗಿದ್ದಾರೆ.